Thursday, September 21, 2017

ಒಗಟುಗಳು

ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ ಹಾಕಿರುತ್ತೆ  -ಬದನೆಕಾಯಿ

ಗುಡುಗು, ಗುಡುಗಿದರೆ ಸಾವಿರ ನಯನಗಳು ಅರಳುವುದು -ನವಿಲು.

ಕಣ್ಣಿಲ್ಲ, ಕಾಲಿಲ್ಲ ,ಆದರು ಚಲಿಸುತಿದೆ ಯಾವುದು ಎಲ್ಲಿದೆ ಬಲ್ಲಿದನ ಹೇಳಿರಲ - ನದಿ

ಮೋಟು ಗೋಡೆ ಮೇಲೆ, ದೀಪ ಉರೀತಿದೆ .-ಮೂಗುಬೊಟ್ಟು

ಹೊಂಚು ಹಾಕಿದ ದೆವ್ವ, ಬೇಡ ಬೇಡ ಎಂದರೂ ಜೂತೆಯೇ ಬರುತ್ತೆ .-ನೆರಳು

ಹೊಕ್ಕಿದ್ದು ಒಂದಾಗಿ ಹೊರಟಿದ್ದು ಅದು ನೂರಾಗಿ  -ಶ್ಯಾವಿಗೆ

ಕತ್ತಲೆ ಮನೆಯಲಿ ಕಾಳವ್ವ ಕುಂತವ್ಳೆ ಕುಯ್ಯೋ, ಮರ್ರೋ ಅಂತವಳೇ  -ತಂಬೂರಿ

No comments:

Post a Comment